alex Certify ರೈತರಿಗೆ ಮುಖ್ಯ ಮಾಹಿತಿ : ‘ಗಂಗಾ ಕಲ್ಯಾಣ’ ಯೋಜನೆʼಗೆ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು ? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮುಖ್ಯ ಮಾಹಿತಿ : ‘ಗಂಗಾ ಕಲ್ಯಾಣ’ ಯೋಜನೆʼಗೆ ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆ ಬೇಕು ? ಇಲ್ಲಿದೆ ಮಾಹಿತಿ

ಬೆಂಗಳೂರು : ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಮೂಲಕ ಅವರ ಸ್ವಾವಲಂಬಿ ಜೀವನವನ್ನು ಸಾಕಾರಗೊಳಿಸಲು ‘ಗಂಗಾ ಕಲ್ಯಾಣ ಯೋಜನೆ’ಯಡಿ, ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹರು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.

ಈ ಯೋಜನೆಯು ಸಂಪೂರ್ಣ ಸಹಾಯಧನ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿAದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆಬಾವಿ ಕೊರೆಯಿಸಿ ಅದಕ್ಕೆ ನಿಗಮದಿಂದ ಪಂಪ್ಸೆಟ್ನ್ನು ಅಳವಡಿಸಲಾಗುವುದು. ಪಂಪ್ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ. 1.50 ಲಕ್ಷವಾಗಿದೆ.

1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ ವಿದ್ಯದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ.3.75 ಲಕ್ಷ (ಇದರಲ್ಲಿ ರೂ.50 ಸಾವಿರ ಸಾಲವೂ ಸೇರಿರುತ್ತದೆ.)

ಅರ್ಹತೆ:

ಫಲಾನುಭವಿಯು ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ವಾರ್ಷಿಕ ಕೌಟುಂಬಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ರೂ.81,000/ಗಳು ಹಾಗೂ ನಗರ ಪ್ರದೇಶಗಳಲ್ಲಿ ರೂ.1.03 ಲಕ್ಷಗಳನ್ನು ಮೀರಿಬಾರದು. ಅರ್ಜಿದಾರರು ‘ಆಧಾರ್’ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿಯನ್ನು ಹೊಂದಿರಬೇಕು ಅರ್ಜಿದಾರರ ವಯಸ್ಸು 18 ರಿಂದ 55 ವರ್ಗಗಳ ಮಿತಿಯಲ್ಲಿರಬೇಕು.

ಬೇಕಾಗುವ ದಾಖಲೆಗಳು
1) ಪರಿಶಿಷ್ಟಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು
2) ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ
3) ಕನಿಷ್ಠ 21 ವರ್ಷ ವಯೋಮಾನ
4) ಸಣ್ಣಹಿಡುವಳಿದಾರರ ಪ್ರಮಾಣಪತ್ರ ಹಾಗೂ ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟು೦ಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್
ಆಸಕ್ತರು ಆಗಸ್ಟ್ 31 ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ದಾಖಲಾತಿಗಳು :
1. ಜಾತಿ ಪ್ರಮಾಣ ಪ್ರತಿ
2. ಆದಾಯ ಪ್ರಮಾಣ ಪ್ರತಿ
3. ಆಧಾರ್ ಕಾರ್ಡ್ ಪ್ರತಿ
4. ಇತ್ತೀಚಿನ ಆರ್.ಟಿ.ಸಿ.
5. ಪಡಿತರ ಚೀಟಿ
6. ಚುನಾವಣಾ ಗುರುತಿನ ಚೀಟಿ, ಸಣ್ಣ / ಅತಿ ಸಣ್ಣ ಹಿಡುವಳಿದಾರ ದೃಢೀಕರಣ ಪತ್ರ
7. ಬ್ಯಾಂಕ್ ಪಾಸ್ ಬುಕ್ ಪ್ರತಿ
8. ಭೂ ಕಂದಾಯ ಪಾವತಿಸಿದ ರಸೀದಿ
9. ಸ್ವಯಂ ಘೋಷಣಾ ಪತ್ರ
10. ಜಾಮೀನುದಾರರ ಸ್ವಯಂ ಘೋಷಣಾ ಪತ್ರ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...