alex Certify ಗಮನಿಸಿ : ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ರಾಜ್ಯ ಮಟ್ಟದ ಬೃಹತ್ ‘ಉದ್ಯೋಗ ಮೇಳ’ದ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಮಾಹಿತಿ

ಬೆಂಗಳೂರು : ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ಇದೇ ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸರ್ಕಾರವು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ”ವನ್ನು ಆಯೋಜಿಸಿದೆ.

ಈ ಮೇಳದಲ್ಲಿ 500ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಒಟ್ಟು1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ. ಇದರಲ್ಲಿ ಕನಿಷ್ಠ 50,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಉದ್ಯೋಗಾಕಾಂಕ್ಷಿ ಯುವಜನತೆಗೆ ಇದೊಂದು ಸುವರ್ಣಾವಕಾಶವಾಗಿದೆ.

ವಿಶೇಷವಾಗಿ ಚಿತ್ತಾಪುರ ಹಾಗೂ ಕಲಬುರಗಿ ಜಿಲ್ಲೆಯ ವಿದ್ಯಾವಂತ ಮತ್ತು ನಿರುದ್ಯೋಗಿ ಯುವಕ-ಯುವತಿಯರಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಮೂಲಕ ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಗಳಿಸಿಕೊಳ್ಳಬಹುದಾಗಿದೆ. ಆದ್ದರಿಂದ ತಾವೆಲ್ಲರೂ ಬೆಂಗಳೂರಿಗೆ ಆಗಮಿಸಿ ಎರಡು ದಿನಗಳ ಕಾಲ ನಡೆಯಲಿರುವ ಈ ಉದ್ಯೋಗ ಮೇಳದಲ್ಲಿ ತಪ್ಪದೇ ಪಾಲ್ಗೊಳ್ಳಿ ಎಂದು ಈ ಮೂಲಕ ಮತ್ತೊಮ್ಮೆ ಮನವಿ ಮಾಡುತ್ತೇನೆ.

ಉದ್ಯೋಗ ಮೇಳದಲ್ಲಿ ಭಾಗವಹಿಸಲು https://skillconnect.kaushalkar.com/ ಗೆ ಭೇಟಿ ನೀಡಿ ಅಥವಾ ಹೆಚ್ಚಿನ ಮಾಹಿತಿಗಾಗಿ 18005999918 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...