2023-24ನೇ ಸಾಲಿನಲ್ಲಿ ವಿದೇಶಿಯ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನ ಯೋಜನೆಯಡಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋವಾ ಹೊನಕಾಂಡೆ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ.6 ಲಕ್ಷ ಒಳಗಿದ್ದಲ್ಲಿ ಎರಡು ವರ್ಷಗಳ ಕೋರ್ಸ್ಗೆ ಗರಿಷ್ಠ ರೂ.20 ಲಕ್ಷಗಳ ಮಿತಿಯಲ್ಲಿ ವಿದ್ಯಾರ್ಥಿವೇತನ ಭರಿಸಲಾಗುವುದು (ಒಂದು ವರ್ಷಕ್ಕೆ ರೂ.10ಲಕ್ಷಗಳಂತೆ). ಪೋಷಕರ ವಾರ್ಷಿಕ ಆದಾಯವು ರೂ.6ಲಕ್ಷದಿಂದ ರೂ.15ಲಕ್ಷಗಳ ಒಳಗಿದ್ದಲ್ಲಿ ಎರಡು ವರ್ಷಗಳ ಕೋರ್ಸ್ಗೆ ರೂ.10ಲಕ್ಷಗಳ ಗರಿಷ್ಠ ಮಿತಿಯಲ್ಲಿ ವಿದ್ಯಾರ್ಥಿ ವೇತನ ಪಾವತಿಸುವುದು (ಒಂದು ವರ್ಷಕ್ಕೆ ರೂ.5ಲಕ್ಷಗಳಂತೆ) ಎಂದು ಅವರು ತಿಳಿಸಿದ್ದಾರೆ.
ವಿದೇಶಿಯ ವಿದ್ಯಾರ್ಥಿವೇತನ ಯೋಜನೆಕ್ಕಾಗಿ ಸೇವಾ ಸಿಂಧು ಪೋರ್ಟ್ಲ್ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 30 ಆಗಿರುತ್ತದೆ.ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ) ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಪೋತ್ಸಾಹಧನ ಯೋಜನೆಯ ಪ್ರಯೋಜನ ಪಡೆಯುವಂತೆ ಅವರು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲನಾ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200215/224 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಬಳ್ಳಾರಿ ಮಾಹಿತಿ ಕೇಂದ್ರ-08392200224/8310321101, ಸಿರುಗುಪ್ಪ ಮಾಹಿತಿ ಕೇಂದ್ರ-ಮೊ.9148889975, ಸಂಡೂರು ಮಾಹಿತಿ ಕೇಂದ್ರ-9036925966 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.