ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವತಿಯಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋಕ್ರೆಡಿಟ್ ಪ್ರೇರಣಾ ಮತ್ತು ಗಂಗಾಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇಂದು ನ.30 ಕೊನೆಯ ದಿನವಾಗಿದೆ.
ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಗ್ರಾಮ ಒನ್ ಗಳಲ್ಲಿ ಅರ್ಜಿಗಳನ್ನು ನವೆಂಬರ್ 30ರೊಳಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ: ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 4ನೇ ಮೈನ್, 16ನೇ ಕ್ರಾಸ್ ಸಂಪಂಗಿರಾಮನಗರ, ಬೆಂಗಳೂರು-560027 ಅಥವಾ ದೂರವಾಣಿ ಸಂಖ್ಯೆ: 080-22240449 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.