ಬೆಂಗಳೂರು : ಮಗುವಿಗೆ 6 ವರ್ಷ ತುಂಬಿದ್ರೆ ಮಾತ್ರ 1ನೇ ತರಗತಿ ಪ್ರವೇಶ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಕಳೆದ ವರ್ಷವೇ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು, ಪೋಷಕರ ಮಾಹಿತಿಗಾಗಿ ಮತ್ತೊಮ್ಮೆ ಮಾಹಿತಿ ನೀಡಲಾಗುತ್ತಿದೆ.
“2025-26ನೇ ಶೈಕ್ಷಣಿಕ ~ ಸಾಲಿನಿಂದ ಅನ್ವಯವಾಗುವಂತೆ ಜೂನ್ ಒಂದನೇ ತಾರೀಕಿಗೆ 2025-26ನೇ ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದೆ.
ಶಿಕ್ಷಣ ಹಕ್ಕು ಕಾಯ್ದೆಯ ಅನ್ವಯ 2016-17ನೇ ಶೈಕ್ಷಣಿಕ ವರ್ಷದಲ್ಲಿ ಎಲ್ಕೆಜಿ ಪ್ರವೇಶಕ್ಕೆ ಮಗುವಿಗೆ 4 ವರ್ಷ, 10 ತಿಂಗಳು ತುಂಬಿರಬೇಕು ಎಂದು ನಿಯಮ ಮಾಡಲಾಯಿತು. ಅದಕ್ಕೂ ಮೊದಲು ಎಲ್ಕೆಜಿ ಪ್ರವೇಶಕ್ಕೆ 3 ವರ್ಷ 10 ತಿಂಗಳು ಆಗಿದ್ದರೆ ಸಾಕಾಗಿತ್ತು. ಅದೇ ರೀತಿ 1ನೇ ತರಗತಿ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ನಡುವೆ ಮಗುವಿನ ವಯಸ್ಸು ಇದ್ದರೆ ದಾಖಲಾತಿ ಮಾಡಿಕೊಳ್ಳಬಹುದು ಎಂದು ನಿಯಮ ರೂಪಿಸಿತ್ತು.
ಆರ್.ಟಿ.ಇ. ಕಾಯ್ದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತೆ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗಧಿಪಡಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ.