ಬೆಂಗಳೂರು : ವಿಕಲಚೇತನರಿಗೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು (ಜನವರಿ 30) ನಾಳೆ ಕೊನೆಯ ದಿನವಾಗಿದೆ.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 05 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆದ್ದರಿಂದ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನೆ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ಕಿಟ್ ಯೋಜನೆ ಈ 05 ಯೋಜನೆಗಳಿಗೆ 2023-24 ನೇ ಸಾಲಿಗೆ ವಿಕಲಚೇತನ ಫಲಾನುಭವಿಗಳು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿಕಲಚೇತನ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಸೇವಾಸಿಂಧು ಪೋರ್ಟಲ್ https://sevasidhu.karnataka.gov.in/Sevasindhu/kannada ನಲ್ಲಿ ಯೋಜನೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಜ.30 ಕಡೆಯ ದಿನವಾಗಿರುತ್ತದೆ.
ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಹಾರ್ಡ್ ಪ್ರತಿಯನ್ನು ದಾಖಲಾತಿಗಳೊಂದಿಗೆ ಲಗತ್ತಿಸಿ ಆಯಾ ತಾಲ್ಲೂಕಿನ ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು(ವಿಆರ್ಡಬ್ಲ್ಯು) ಹಾಗೂ ತಾಲ್ಲೂಕು ಮಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು(ಎಂಆರ್ ಡಬ್ಲ್ಯು) ಗಳಿಗೆ ನೀಡಬೇಕು.ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.