ಬೆಂಗಳೂರು : ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಎಲ್ಲ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ. ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ. ಇ-ಕೆವೈಸಿ ಮಾಡಿಕೊಂಡ ಫಲಾನುಭವಿಗಳಿಗೆ ಮಾತ್ರ ಮುಂದಿನ ಕಂತಿನ ಹಣ ಜಮೆಯಾಗಲಿದ್ದು, ಅರ್ಹ ಫಲಾನುಭವಿಗಳು ಕೂಡಲೇ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ.
ಇ-ಕೆವೈಸಿ ಮಾಡಿಕೊಳ್ಳುವ ವಿಧಾನ: ಪ್ಲೇ ಸ್ಟೋರ್ ನಲ್ಲಿ ಪಿ.ಎಮ್.ಕಿಸಾನ್ ಮೊಬೈಲ್ ಆ್ಯಪ್ ಡೌನೋಡ್ ಮಾಡಿಕೊಳ್ಳವುದರ ಮುಖಾಂತರ ಇ-ಕೆವೈಸಿ ಓಟಿಪಿ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.gov.in ವೆಬ್‍ಸೈಟ್ ನಲ್ಲಿ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕ್ಕಿಸಿ ಆಧಾರ ನಂಬರ್ ಹಾಗೂ ಕ್ಯಾಪ್‍ಚಾ ನಮೂದಿಸಿ ತದನಂತರ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ದಾಖಲಿಸಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.
ಇ-ಕೆವೈಸಿ ಬಯೋಮೆಟ್ರಿಕ್ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (ಸಿಎಸ್‍ಸಿ) ಕ್ಕೆ ಭೇಟಿ ನೀಡಿ ಆಧಾರ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. ಈ ಪ್ರಕ್ರಿಯೆಗಾಗಿ ಸಿಎಸ್‍ಸಿ ಕೇಂದ್ರದವರು ಎಲ್ಲ ಟ್ಯಾಕ್ಸ್ ಒಳಗೊಂಡಂತೆ, ರೂ.15/- ಗಳನ್ನು ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತ ಬಾಂಧವರು ಹತ್ತಿರದ ರೈತ ಸಂಪರ್ಕ ಕೇಂದ್ರ, ಸಿಎಸ್‍ಸಿ ಸೆಂಟರ್, ಗ್ರಾಮ ಒನ್, ಕೃಷಿ ಹಾಗೂ ಪಶು ಸಖಿ, ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು