
ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಪಿಯು ಕಾಲೇಜುಗಳ ಪ್ರಾಂಶುಪಾಲರ/ಉಪನ್ಯಾಸಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಿರ್ವಹಿಸುವಂತೆ ಸೂಚನೆ ನೀಡಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮಗಳು – 2020″ ಮತ್ತು ಉಲ್ಲೇಖ-3ರ ನಿಯಮಗಳನ್ವಯ ಪ್ರಾಂಶುಪಾಲರ / ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲು ಅವಕಾಶ ಕಲ್ಪಿಸಲಾಗಿದೆ.
ಅದರಂತೆ, 2023-24ನೇ ಸಾಲಿಗೆ ಪ್ರಾಂಶುಪಾಲರ / ಉಪನ್ಯಾಸಕರ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸೆಲಿಂಗ್ ಮೂಲಕ ನಡೆಸಲು ಉಲ್ಲೇಖ-4ರಲ್ಲಿ ಸರ್ಕಾರವು ಅನುಮತಿಸಿರುತ್ತದೆ. ಈ ವರ್ಗಾವಣೆಗೆ ಅರ್ಜಿಗಳನ್ನು ಆನ್‌ಲೈನ್ (Online) ಮೂಲಕ ಮಾತ್ರ ಸಲ್ಲಿಸತಕ್ಕದ್ದು, ಖುದ್ದಾಗಿ ಅಥವಾ ಪತ್ರ ಮುಖೇನ ಮೂಲಕ ಲಿಖಿತವಾಗಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಮತ್ತು ಪರಿಗಣಿಸಲಾಗುವುದಿಲ್ಲ ಎಂದು ಮಾಹಿತಿ ನೀಡಿದೆ.

