alex Certify `APL-BPL’ ಸೇರಿ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`APL-BPL’ ಸೇರಿ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಆಗಸ್ಟ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14ಕೆ.ಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆÉ 3ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಗ್ಯಾರಂಟಿ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿಯ ಬದಲು ವ್ಯಕ್ತಿಗೆ ತಲಾ ರೂ.170ರಂತೆ ಡಿ.ಬಿ.ಟಿ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದು ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಶಾಖೆಗಳಿಗೆ ಹಾಗೂ ಸ್ಥಳೀಯ ಆಹಾರ ನಿರೀಕ್ಷರನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...