ಪಥನಂತಿಟ್ಟ : ಮಕರ ಸಂಕ್ರಾಂತಿಗೆ ಕೇವಲ ಐದು ದಿನಗಳು ಬಾಕಿ ಇರುವಾಗಲೇ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಭಾರಿ ನೂಕುನುಗ್ಗಲು ಉಂಟಾಗುತ್ತಿದೆ. ಜನಸಂದಣಿಯನ್ನು ನಿರ್ವಹಿಸುವ ಸಲುವಾಗಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಬುಧವಾರದಿಂದ ಸ್ಪಾಟ್ ಬುಕಿಂಗ್ ಅನ್ನು ನಿಲ್ಲಿಸಿದೆ ಎಂದು ತಿಳಿದು ಬಂದಿದೆ.
ಜನವರಿ 15 ರಂದು ಮಕರವಿಳಕ್ಕು ಉತ್ಸವ ನಡೆಯಲಿದ್ದು, ಕಳೆದ ಕೆಲವು ದಿನಗಳಿಂದ ಶಬರಿಮಲೆಗೆ ಪ್ರತಿದಿನ ಸರಾಸರಿ 90,000 ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ದರ್ಶನಕ್ಕಾಗಿ 10-18 ಗಂಟೆಗಳ ಕಾಲ ಕಾಯಬೇಕಾಗಿದೆ ಎಂದು ಭಕ್ತರು ದೂರಿದ್ದಾರೆ. ಮಂಗಳವಾರ ಮಧ್ಯಾಹ್ನ, ಗರ್ಭಗುಡಿಯ ಬಳಿಯ ಫ್ಲೈಓವರ್ನಿಂದ ಸರತಿ ಸಾಲುಗಳನ್ನು ನಿರ್ವಹಿಸಲು ಬಳಸಲಾಗುತ್ತಿದ್ದ ಬ್ಯಾರಿಕೇಡ್ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಗಾಯಗಳು ಸಂಭವಿಸಿಲ್ಲ.