alex Certify BIG NEWS : ‘ವರ್ಗಾವಣೆ ‘ನಿರೀಕ್ಷೆಯಲ್ಲಿರುವ ರಾಜ್ಯದ ‘ವಿಶೇಷ ಚೇತನ’ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ವರ್ಗಾವಣೆ ‘ನಿರೀಕ್ಷೆಯಲ್ಲಿರುವ ರಾಜ್ಯದ ‘ವಿಶೇಷ ಚೇತನ’ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ..!

ಬೆಂಗಳೂರು : ವಿಶೇಷ ಚೇತನ’ ಸರ್ಕಾರಿ ನೌಕರರರ ವರ್ಗಾವಣೆ ಕುರಿತು ರಾಜ್ಯ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ.

ಅಂಗವಿಕಲ ವ್ಯಕ್ತಿಗಳ ಹಕ್ಕು (ಅಧಿನಿಯಮ) 2016ರ ಸೆಕ್ಷನ್ 20(5)ರನ್ವಯ ವಿಶೇಷ ಚೇತನ ನೌಕರರಿಗೆ ಮತ್ತು ವಿಶೇಷ ಚೇತನ ಅವಲಂಬಿತರ ಪಾಲನೆ ಪೋಷಣೆಯ ಜವಾಬ್ದಾರಿ ಹೊಂದಿರುವ ನೌಕರರಿಗೆ ಸಾಮಾನ್ಯ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು, ವರ್ಗಾವಣೆ ಮತ್ತು ಪದೋನ್ನತ್ತಿಯ ನಂತರದಲ್ಲಿ ಸ್ಥಳ ನಿಯುಕ್ತಿಯಲ್ಲಿ ಪ್ರಾಶಸ್ತ್ರ ನೀಡುವುದು, ನೇಮಕಾತಿ ನಂತರದಲ್ಲಿ ನೀಡುವ ಆರಂಭಿಕ ಸ್ಥಳ ನಿಯುಕ್ತಿಯನ್ನು ಅವರ ವಾಸಸ್ಥಳದ ಹತ್ತಿರದ ಸ್ಥಳಕ್ಕೆ ನೀಡುವುದನ್ನು ಒಳಗೊಂಡಂತೆ, ಅವರು ಘನತೆಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವರ್ಗಾವಣೆ ಮತ್ತು ಸ್ಥಳನಿಯುಕ್ತಿ ನಿಯಮಗಳನ್ನು ರೂಪಿಸುವುದು ಅಗತ್ಯವಾಗಿರುತ್ತದೆ. ಆದ್ದರಿಂದ ವಿಶೇಷ ಚೇತನ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ಸರ್ಕಾರವು 2016ರ ಕಾಯ್ದೆಯ ಅಂಶಗಳನ್ನಯ ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಉಲ್ಲೇಖ 1ರ ಸರ್ಕಾರಿ ಆದೇಶಕ್ಕೆ ಈ ಕೆಳಕಂಡ ಅಂಶಗಳನ್ನು ಸೇರ್ಪಡೆಗೊಳಿಸಿ ಆದೇಶಿಸಿಲಾಗಿದೆ.

(ಎ) ವಿಶೇಷ ಚೇತನ ನೌಕರರಿಗೆ ನಿಯತಕಾಲಿಕ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು;
(ಬಿ) ವಿಶೇಷ ಚೇತನರು ನೇಮಕಾತಿಗೆ ಆಯ್ಕೆಯಾದ ನಂತರದಲ್ಲಿ ನೀಡುವ ಪ್ರಾರಂಭಿಕ ಸ್ಥಳ ನಿಯುಕ್ತಿಯನ್ನು (Initial posting) ಹಾಗೂ ಪದೋನ್ನತಿಯ ನಂತರದಲ್ಲಿ ಅವರ ವರ್ಗಾವಣೆ ಅವಶ್ಯಕವೆನಿಸಿದಲ್ಲಿ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸುವುದು.
(ಸಿ) ಸರ್ಕಾರಿ ನೌಕರನ ಅವಲಂಬಿತ ಮಕ್ಕಳು, ಪತಿ/ಪತ್ನಿ, ತಂದೆ, ತಾಯಿ ಇವರುಗಳು ತೀವ್ರತರವಾದ ಅಂಗವೈಕಲ್ಯವನ್ನು ಹೊಂದಿದ್ದಲ್ಲಿ ಹಾಗೂ ಸರ್ಕಾರಿ ನೌಕರನು ಅವರ ನಿರ್ವಹಣೆ ಹಾಗೂ ಪುನರ್ ವಸತಿಯ ಜವಾಬ್ದಾರಿ ಹೊತ್ತು ಅಂಗವಿಕಲರ ಹಕ್ಕುಗಳನ್ನು ಸಂರಕ್ಷಣೆ ಮಾಡುವಲ್ಲಿ ಹೆಚ್ಚಿನ ಪಾತ್ರವಹಿಸುತ್ತಿದ್ದಲ್ಲಿ ಅಂತಹ ನೌಕರರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು, ಅಂತಹ ದಾಖಲೆಗಳನ್ನು ಪರಿಶೀಲಿಸಿ, ನಿಯತಕಾಲಿಕ ವರ್ಗಾವಣೆಗಳಿಂದ ವಿನಾಯಿತಿ ನೀಡಬಹುದು ಮತ್ತು అంతేరు ನೌಕರರುಗಳಿಗೆ ಸಾಧ್ಯವಾದಷ್ಟು ಹತ್ತಿರದ ಸ್ಥಳಕ್ಕೆ ಸ್ಥಳ ನಿಯುಕ್ತಿಗೊಳಿಸುವುದು.
(ಡಿ) ಸೇವಾನಿರತ ಸರ್ಕಾರಿ ನೌಕರರು ತಮ್ಮ ಸೇವೆಯ ಅವಧಿಯಲ್ಲಿ ಅಂಗವಿಕಲರಾದಲ್ಲಿ, ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವ ಷರತ್ತಿಗೊಳಪಟ್ಟು ಅವರನ್ನು ಹತ್ತಿರದ ಸ್ಥಳಕ್ಕೆ ವರ್ಗಾಯಿಸುವುದು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...