ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ.15 ನಾಳೆ ಕೊನೆಯ ದಿನವಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಆಯಾ ಹಿಂದುಳಿದ ತಾಲೂಕು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.