alex Certify BIG NEWS : ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ : ಚಂದನವಾಹಿನಿಯಲ್ಲಿ ‘ರಸಪ್ರಶ್ನೆ’ ಕಾರ್ಯಕ್ರಮ ವೀಕ್ಷಿಸುವಂತೆ ಶಿಕ್ಷಣ ಇಲಾಖೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ : ಚಂದನವಾಹಿನಿಯಲ್ಲಿ ‘ರಸಪ್ರಶ್ನೆ’ ಕಾರ್ಯಕ್ರಮ ವೀಕ್ಷಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು : ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರವಾಗುವ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮವನ್ನು ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೀಕ್ಷಿಸುವಂತೆ ಕ್ರಮ ಕೈಗೊಳ್ಳುವಂತೆ ಸಮಗ್ರ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

2023-24ನೇ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಸಹಯೋಗದೊಂದಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಬೆಂಗಳೂರು ರವರು ಸರ್ಕಾರಿ ಶಾಲೆಗಳಲ್ಲಿ 8 ರಿಂದ 10ನೇ ತರಗತಿಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಆರ್ಥಿಕ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸಲು ಶಾಲಾ, ಬ್ಲಾಕ್, ಜಿಲ್ಲಾ ಹಾಗೂ ರಾಜ್ಯ ಹಂತಗಳಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ಹಮ್ಮಿಕೊಂಡು ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ನೀಡಿ ಪ್ರೋತ್ಸಾಹಿಸಲಾಗಿತ್ತು. ‘ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ದಿನಾಂಕ: 05.07,2023ರಂದು ದೂರದರ್ಶನ ಚಂದನವಾಹಿನಿ ಬೆಂಗಳೂರು, ಇಲ್ಲಿ ನಡೆಸಲಾಯಿತು. ಈ ಸ್ಪರ್ಧೆಯನ್ನು ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವೀಕ್ಷಿಸುವಂತ ದಿನಾಂಕ:20.07.2023 ಹಾಗೂ ದಿನಾಂಕ:21.07.2023 ರಂದು ರಾತ್ರಿ 9.30ಕ್ಕೆ ಪ್ರಸಾರ ಮಾಡಲಾಗುವುದು.ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು(ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರು ತಮ್ಮ ಜಿಲ್ಲೆಯ ಎಲ್ಲಾ ಶಾಲೆಗಳ ಹಾಗೂ ವಸತಿ ನಿಲಯಗಳ ವಿದ್ಯಾರ್ಥಿಗಳು, ಶಿಕ್ಷಕರು, ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರವಾಗುವ ಈ ಕಾರ್ಯಕ್ರಮವನ್ನು ವೀಕ್ಷಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ.

ಹಾಗೂ ಹಾಗೂ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಬಗ್ಗೆ ಪತ್ರದೊಂದಿಗೆ ಲಗತ್ತಿಸಿರುವ ಅನುಬಂಧ-01ರಲ್ಲಿ ಮಾಹಿತಿಯನ್ನು ತಮ್ಮ ಸಹಿ ಹಾಗೂ ಮೊಹರಿನೊಂದಿಗೆ ರಾಜ್ಯ ಕಛೇರಿಯ ಇಮೇಲ್ ವಿಳಾಸ Innovativessk2022@gmail.comಗೆ ದಿನಾಂಕ:25.07.2023 ರೊಳಗೆ ಕಡ್ಡಾಯವಾಗಿ ಸಲ್ಲಿಸಲು ಸಮಗ್ರ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...