ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿಲಾಗಿದ್ದು, ಅರ್ಜಿ ಸಲ್ಲಿಸಲು ಡಿ.15 ಇಂದು ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಬಳ್ಳಾರಿ ಕಚೇರಿ ದೂ.08392-245755, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆ ಹೊರಡಿಸಿದ್ದಾರೆ.