alex Certify ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸಾರಿಗೆ ಇಲಾಖೆ ನೌಕರರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸಾರಿಗೆ ಇಲಾಖೆ ನೌಕರರಿಗೆ ಮುಖ್ಯ ಮಾಹಿತಿ

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಸಾರಿಗೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, ಸಾರಿಗೆ ಇಲಾಖೆಯ ಅಂತರ್ ನಿಗಮ ವರ್ಗಾವಣೆ ಆರಂಭವಾಗಿದೆ.

ವರ್ಗಾವಣೆ ಬಯಸುವ ಸಾರಿಗೆ ಇಲಾಖೆಯ 3 ಮತ್ತು 4 ನೇ ದರ್ಜೆ ನೌಕರರು ಇಂದಿನಿಂದ ಅಂತರ್ ನಿಗಮ ವರ್ಗಾವಣೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ನೌಕರರು www.ksrtc.org/transfer ವೆಬ್ ಸೈಟ್ ನಲ್ಲಿ ಸಾಮಾನ್ಯ ಹಾಗೂ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಬೇಕು ಕೆಎಸ್ ಆರ್ ಟಿಸಿ ಮಾಹಿತಿ ನೀಡಿದೆ.

ಕೆಎಸ್ ಆರ್ ಟಿಸಿ, ಕಲ್ಯಾಣ ಕರ್ನಾಟಕ, ವಾಯುವ್ಯ ಕರ್ನಾಟಕ, ಬಿಎಂಟಿಸಿ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 3 ಮತ್ತು 4 ನೇ ದರ್ಜೆ ನೌಕರರು ಜುಲೈ 5 ರ ಬೆಳಗ್ಗೆ 11 ಗಂಟೆಯಿಂದ ಆಗಸ್ಟ್ 18 ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...