ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ – ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸುವ ಕುರಿತಂತೆ ಮಾಜಿ ಶಾಸಕ ಪ್ರೀತಮ್ ಗೌಡ ಮಹತ್ವದ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಸ್ಪರ್ಧೆ ಕುರಿತಂತೆ ನಾನೂ ಸೇರಿದಂತೆ ಬಿಜೆಪಿ ಕಾರ್ಯಕರ್ತರಲ್ಲಿ ಯಾವುದೇ ಗೊಂದಲವಿಲ್ಲ. NDA ಮೈತ್ರಿಕೂಟದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಪಕ್ಷದ ವರಿಷ್ಠರು ಸೂಚಿಸಿದ್ದು, ಅದರಂತೆ ಕೆಲಸ ಮಾಡಲಿದ್ದೇವೆ ಎಂದಿದ್ದಾರೆ.
ಇನ್ನು ಈ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರೀತಮ್ ಗೌಡ ಅವರೊಂದಿಗೆ ನಾನು ಮಾತನಾಡಿದ್ದು, ಪ್ರಜ್ವಲ್ ರೇವಣ್ಣರನ್ನು ಬೆಂಬಲಿಸಲಿದ್ದಾರೆ. ಪ್ರೀತಮ್ ಗೌಡ ಅವರಿಗೆ ಮೈಸೂರು, ಚಾಮರಾಜನಗರ ಉಸ್ತುವಾರಿ ವಹಿಸಿದ್ದು ಆ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಹೇಳಿದ್ದಾರೆ.