ಪಶ್ಚಿಮ ಗಡಿಗಳಲ್ಲಿ ಉಂಟಾಗುವ ತುರ್ತು ಪರಿಸ್ಥಿತಿಗಳಿಗೆ ತಕ್ಷಣವೇ ಸ್ಪಂದಿಸುವ ಸಲುವಾಗಿ ಹೆದ್ದಾರಿ ಸಚಿವಾಲಯವು ರಾಜಸ್ಥಾನದಲ್ಲಿ ಮಿಲಿಟರಿ ವಿಮಾನಗಳು ಲ್ಯಾಂಡ್ ಆಗಲು ಅನುಕೂಲವಾಗುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಏರ್ ಸ್ಟ್ರಿಪ್ಗಳನ್ನು ಅಭಿವೃದ್ಧಿಪಡಿಸಿದೆ.
ಭಾರತೀಯ ವಾಯುಪಡೆಗೆ ಸೇರಿದ ಯುದ್ಧ ವಿಮಾನಗಳು ಸೇರಿದಂತೆ ಇತರೆ ವಿಮಾನಗಳು ಲ್ಯಾಂಡ್ ಆಗಲು ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲಾದ ಏರ್ಸ್ಟ್ರಿಪ್ಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದ್ರು.
ಈ ಇಬ್ಬರು ಸಚಿವರು ಐಎಎಫ್ ವಿಮಾನದ ಮೂಲಕ 3.5 ಕಿಮೀ ಉದ್ದದ ಏರ್ಸ್ಟ್ರಿಪ್ನಲ್ಲಿ ಲ್ಯಾಂಡ್ ಆಗಲಿದ್ದಾರೆ ಎನ್ನಲಾಗಿದೆ. ಐಎಎಫ್ ವಿಮಾನಗಳ ತುರ್ತು ಭೂಸ್ಪರ್ಶಕ್ಕೆಂದೇ ಆಂಧ್ರ ಪ್ರದೇಶದಲ್ಲಿ ಈಗಾಗಲೇ 2 ಏರ್ಸ್ಟ್ರಿಪ್ಗಳನ್ನು ನಿರ್ಮಾಣ ಮಾಡಲಾಗಿದೆ. ಹಾಗೂ ಜಮ್ಮುಕಾಶ್ಮೀರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 1 ಏರ್ಸ್ಟ್ರಿಪ್ಗಳ ಕಾಮಗಾರಿ ಪ್ರಗತಿಯಲ್ಲಿದೆ.
ಬಾರ್ಮರ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ 1 ಸ್ಟ್ರಿಪ್ನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಾಣ ಮಾಡಿದೆ. ಇದು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾದ ಮೊದಲ ಏರ್ಸ್ಟ್ರಿಪ್ ಆಗಿದೆ. ಇದೇ ರೀತಿ ರಾಷ್ಟ್ರೀಯ ಹೆದ್ದಾರಿ 12 ಏರ್ಸ್ಟ್ರಿಪ್ ನಿರ್ಮಾಣ ಮಾಡುವ ಯೋಜನೆ ಹೊಂದಿದೆ.