alex Certify BIG NEWS: ಇದೇ ಮೊದಲ ಬಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲ್ಯಾಂಡ್‌ ಆಗಲಿದೆ ಐಎಎಫ್​​ ವಿಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದೇ ಮೊದಲ ಬಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲ್ಯಾಂಡ್‌ ಆಗಲಿದೆ ಐಎಎಫ್​​ ವಿಮಾನ

ಪಶ್ಚಿಮ ಗಡಿಗಳಲ್ಲಿ ಉಂಟಾಗುವ ತುರ್ತು ಪರಿಸ್ಥಿತಿಗಳಿಗೆ ತಕ್ಷಣವೇ ಸ್ಪಂದಿಸುವ ಸಲುವಾಗಿ ಹೆದ್ದಾರಿ ಸಚಿವಾಲಯವು ರಾಜಸ್ಥಾನದಲ್ಲಿ ಮಿಲಿಟರಿ ವಿಮಾನಗಳು ಲ್ಯಾಂಡ್​ ಆಗಲು ಅನುಕೂಲವಾಗುವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಏರ್​ ಸ್ಟ್ರಿಪ್​​ಗಳನ್ನು ಅಭಿವೃದ್ಧಿಪಡಿಸಿದೆ.

ಭಾರತೀಯ ವಾಯುಪಡೆಗೆ ಸೇರಿದ ಯುದ್ಧ ವಿಮಾನಗಳು ಸೇರಿದಂತೆ ಇತರೆ ವಿಮಾನಗಳು ಲ್ಯಾಂಡ್​ ಆಗಲು ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲಾದ ಏರ್​ಸ್ಟ್ರಿಪ್​ಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಚಾಲನೆ ನೀಡಿದ್ರು.

ಈ ಇಬ್ಬರು ಸಚಿವರು ಐಎಎಫ್​ ವಿಮಾನದ ಮೂಲಕ 3.5 ಕಿಮೀ ಉದ್ದದ ಏರ್​ಸ್ಟ್ರಿಪ್​​ನಲ್ಲಿ ಲ್ಯಾಂಡ್​ ಆಗಲಿದ್ದಾರೆ ಎನ್ನಲಾಗಿದೆ. ಐಎಎಫ್​ ವಿಮಾನಗಳ ತುರ್ತು ಭೂಸ್ಪರ್ಶಕ್ಕೆಂದೇ ಆಂಧ್ರ ಪ್ರದೇಶದಲ್ಲಿ ಈಗಾಗಲೇ 2 ಏರ್​ಸ್ಟ್ರಿಪ್​ಗಳನ್ನು ನಿರ್ಮಾಣ ಮಾಡಲಾಗಿದೆ. ಹಾಗೂ ಜಮ್ಮುಕಾಶ್ಮೀರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 1 ಏರ್​ಸ್ಟ್ರಿಪ್​​​ಗಳ ಕಾಮಗಾರಿ ಪ್ರಗತಿಯಲ್ಲಿದೆ.

ಬಾರ್ಮರ್​ನ ರಾಷ್ಟ್ರೀಯ ಹೆದ್ದಾರಿಯಲ್ಲಿ 1 ಸ್ಟ್ರಿಪ್​ನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಾಣ ಮಾಡಿದೆ. ಇದು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾದ ಮೊದಲ ಏರ್​ಸ್ಟ್ರಿಪ್​ ಆಗಿದೆ. ಇದೇ ರೀತಿ ರಾಷ್ಟ್ರೀಯ ಹೆದ್ದಾರಿ 12 ಏರ್​ಸ್ಟ್ರಿಪ್​​​ ನಿರ್ಮಾಣ ಮಾಡುವ ಯೋಜನೆ ಹೊಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...