HomeIndiaಕೇಂದ್ರ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : 1,800 ಔಷಧಿಗಳು, 285 ಶಸ್ತ್ರಚಿಕಿತ್ಸಾ ಸಲಕರಣೆಗಳ...

ಕೇಂದ್ರ ಸರ್ಕಾರದಿಂದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : 1,800 ಔಷಧಿಗಳು, 285 ಶಸ್ತ್ರಚಿಕಿತ್ಸಾ ಸಲಕರಣೆಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 1,800 ಔಷಧಿಗಳು ಮತ್ತು 285 ಶಸ್ತ್ರಚಿಕಿತ್ಸಾ ಉಪಕರಣಗಳ ಬೆಲೆ ಇಳಿಕೆ ಮಾಡಲಾಗಿದ್ದು, ಇನ್ಮುಂದೆ ಪ್ರಧಾನ ಮಂತ್ರಿ  ಭಾರತೀಯ ಜನೌಷಧಿ ಕೇಂದ್ರಗಳಲ್ಲಿ ಸಿಗಲಿವೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ತಿಳಿಸಿದೆ.

ಈ ಉತ್ಪನ್ನಗಳು ಮಾರುಕಟ್ಟೆಗೆ ಹೋಲಿಸಿದರೆ ಶೇ.50ರಿಂದ 90ರಷ್ಟು ಕಡಿಮೆ ಬೆಲೆಯಲ್ಲಿ ಲಭ್ಯ. ಈ ವರ್ಷ ಡಿಸೆಂಬರ್ 31 ರೊಳಗೆ ದೇಶದಲ್ಲಿ 10,000 ಜನೌಷಧಿ ಕೇಂದ್ರಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ತಿಂಗಳವರೆಗೆ ದೇಶಾದ್ಯಂತ ಒಟ್ಟು 9,500 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಕೇಂದ್ರಗಳ ಸಂಖ್ಯೆ 100 ಪಟ್ಟು ಹೆಚ್ಚಾಗಿದೆ ಮತ್ತು ಮಾರಾಟವು 170 ಪಟ್ಟು ಹೆಚ್ಚಾಗಿದೆ ಎಂದು ಸಚಿವಾಲಯ ಹೇಳಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular