ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳೆ ಬಲಿ ಪಡೆದಿದ್ದ ಜಾಗದಲ್ಲಿ ಮತ್ತೊಂದು ಚಿರತೆ ಸೆರೆಯಾಗಿದೆ. ಬೆಂಗಳೂರಿನಲ್ಲಿ ಮತ್ತೊಂದು ಚಿರತೆಯೊಂದು ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.
ಕಳೆದ ವಾರ ಮಹಿಳೆಯೋರ್ವರನ್ನು ಚಿರತೆ ಬಲಿ ಪಡೆದಿತ್ತು, ಚಿರತೆ ದಾಳಿಗೆ ಮಹಿಳೆ ಕರಿಯಮ್ಮ (55) ಬಲಿಯಾದ ಘಟನೆ ನೆಲಮಂಗಲ ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿತ್ತು . ಈ ಜಾಗದಲ್ಲಿ ಮತ್ತೊಂದು ಚಿರತೆಯನ್ನು ಸೆರೆ ಹಿಡಿಯಲಾಗಿದೆ.
ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿತ್ತು. ಬಳಿಕ ರುಂಡ ಮುಂಡ ಪ್ರತ್ಯೇಕವಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು.ನಿನ್ನೆಯಷ್ಟೇ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಚಿರತೆಯೊಂದು ಸಿಕ್ಕಿಹಾಕಿಕೊಂಡಿತ್ತು, ನಾಯಿ ತಿನ್ನಲು ಬಂದ ಚಿರತೆ ಬೋನಿಗೆ ಬಿದ್ದಿತ್ತು. ಇಂದು ಮತ್ತೊಂದು ಚಿರತೆ ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದೆ.