alex Certify BREAKING : ಬೆಂಗಳೂರಲ್ಲಿ ಶಾಕಿಂಗ್ ಘಟನೆ ; ಯುವಕನನ್ನು ನಗ್ನಗೊಳಿಸಿ ಹಲ್ಲೆ ಮಾಡಿ ಸಿಟಿಯಲ್ಲಿ ಓಡಿಸಿದ ರೌಡಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಶಾಕಿಂಗ್ ಘಟನೆ ; ಯುವಕನನ್ನು ನಗ್ನಗೊಳಿಸಿ ಹಲ್ಲೆ ಮಾಡಿ ಸಿಟಿಯಲ್ಲಿ ಓಡಿಸಿದ ರೌಡಿ.!

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಗಳು ಕೀಚಕ ಕೃತ್ಯ ಎಸಗಿದ್ದು, ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ ವಿಕೃತಿ ಮೆರೆದ ಘಟನೆ ನಡೆದಿದೆ.

ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಗೋಪಾಲನಗರದಲ್ಲಿ ಈ ಘಟನೆ ನಡೆದಿದೆ.
ರೌಡಿಶೀಟರ್ ಗಳು ಯುವಕನ ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ ಆತನ ಮೇಲೆ ಮನಬಂದಂತೆ ಥಳಿಸಿದ್ದಾರೆ. ಮೊಬೈಲ್ ನಲ್ಲಿ ಇದನ್ನು ವಿಡಿಯೋ ಮಾಡುತ್ತಾ ಸಿಟಿ ತುಂಬಾ ಓಡಿಸಿದ್ದಾರೆ. ಯುವಕ ಪ್ರಾಣ ಉಳಿಸಿಕೊಳ್ಳಲು ಓಡುತ್ತಿರುವ ದೃಶ್ಯ ವೈರಲ್ ಆಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರೌಡಿಶೀಟರ್ ಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...