ಜಮ್ಮು ಕಾಶ್ಮೀರದ ಉರಿಯಲ್ಲಿ ಪಾಕ್ ಪೋಷಿತ ಭಯೋತ್ಪಾದಕರು ಯೋಧರ ಮೇಲೆ ನಡೆಸಿದ ದಾಳಿಯಲ್ಲಿ 19 ವೀರ ಯೋಧರು ಹುತಾತ್ಮರಾದ ಘಟನೆ ಬಳಿಕ ಇದಕ್ಕೆ ಪ್ರತೀಕಾರವಾಗಿ ಭಾರತ, ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು ಈ ದಾಳಿಯಲ್ಲಿ ನೂರಾರು ಉಗ್ರರು ಬಲಿಯಾಗಿದ್ದರು.
ಆದರೆ ಈ ದಾಳಿ ಕುರಿತಂತೆ ಪದೇ ಪದೇ ಪ್ರಸ್ತಾಪಿಸುತ್ತಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್, ಸರ್ಜಿಕಲ್ ಸ್ಟ್ರೈಕ್ ನಡೆಸಿರುವ ಕುರಿತು ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಆರೋಪಿಸಿದ್ದರು. ಇದೀಗ ಅವರು ಈ ವಿಷಯವನ್ನು ಮತ್ತೊಮ್ಮೆ ಕೆದಕಿದ್ದಾರೆ.
ಈ ಕುರಿತಂತೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಸರ್ಜಿಕಲ್ ಸ್ಟ್ರೈಕ್ ಕುರಿತಂತೆ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಈವರೆಗೆ ಪುರಾವೆಯನ್ನೇ ನೀಡಿಲ್ಲ. ಬಿಜೆಪಿಯವರು ಕೇವಲ ಸುಳ್ಳುಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಆದರೆ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿರುವ ಕಾಂಗ್ರೆಸ್, ಇದು ದಿಗ್ವಿಜಯ ಸಿಂಗ್ ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದೆ.