ಚಂಡಿಗಢ: ಪಂಜಾಬ್ ನಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತ ವಿದ್ಯುತ್ ಒದಗಿಸುವುದಾಗಿ ಆಮ್ ಆದ್ಮಿ ಪಾರ್ಟಿ ಮುಖ್ಯಸ್ಥ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಪಂಜಾಬ್ ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ಉಚಿತವಾಗಿ ವಿದ್ಯುತ್ ನೀಡುವುದಾಗಿ ಘೋಷಿಸಲಾಗಿದೆ.
ದೆಹಲಿಯಲ್ಲಿ ಎಲ್ಲರಿಗೂ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತಿದ್ದು, ಪಂಜಾಬಿನಲ್ಲಿ ಅಧಿಕಾರಕ್ಕೆ ಬಂದರೆ ಉಚಿತ ವಿದ್ಯುತ್ ಒದಗಿಸುತ್ತೇವೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಈ ಮೂಲಕ ‘ಪವರ್ ಪ್ಲೇ’ ಆರಂಭಿಸಿ ಬೇರೆ ಪಕ್ಷಗಳಿಗೆ ಶಾಕ್ ನೀಡಿದ್ದಾರೆ.