ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಸೆ. 07 ರಂದು ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ನಂತರ ವಿವಿಧ ದಿನಾಂಕಗಳಂದು ವಿಸರ್ಜನೆಯನ್ನು ಮೆರವಣಿಗೆ ಮೂಲಕ ಹೊಳೆ, ನದಿ, ಕೆರೆಗಳು, ಹಿನ್ನೀರು ಪ್ರದೇಶಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಮೂರರಿಂದ ನಾಲ್ಕು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶವನ್ನು ನೀಡಿ, ಕಡ್ಡಾಯವಾಗಿ ಲೈಫ್ ಜಾಕೆಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ತೆಪ್ಪ ಬಳಕೆ ಕಡ್ಡಾಯ
03-09-2024 9:16PM IST / No Comments / Posted In: Karnataka, Featured News, Live News