ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮಹಿಳೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತಿಬ್ಬರಿಗೆ ಮನೆಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಕಲ ಸಿದ್ದತೆ ಮಾಡಲಾಗಿದ್ದು, ಸೋಂಕಿತರಿಗೆ ಬೆಡ್ ವ್ಯವಸ್ಥೆ, ವೆಂಟಿಲೇಟರ್ ಸೇರಿದಂತೆ ಎಲ್ಲಾ ಸಿದ್ದತೆ ಮಾಡಲಾಗಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಕೋವಿಡ್ ಭೀತಿ ಮನೆ ಮಾಡಿದ್ದು, ಎಚ್ಚರಿಕೆಯಿಂದ ಇರುವಂತೆ ಸರ್ಕಾರ ಸೂಚನೆಗಳನ್ನು ನೀಡಿದೆ.