
ತಮಿಳುನಾಡಿನ ತಿರುಚ್ಚಿ-ಸೇಲಂ ರಾಷ್ಟ್ರೀಯ ಹೆದ್ದಾರಿಯ ತಿರುವಾಸಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಪ್ರಾಪ್ತ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಭಾನುವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಮೂವರು ಗಂಭೀರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರನ್ನು ಕೆ. ಮುತ್ತುಸ್ವಾಮಿ(58), ಸಂತೋಷ್ ಕುಮಾರ್(31), ಪಿ. ಆನಂದಾಯಿ(57), ತಿರುಮೂರ್ತಿ(43), ಜಿ. ಸಕುಂತಲಾ(36), ಪಿ. ಮುರುಗನ್(23), ಮತ್ತೊಬ್ಬ ಅಪ್ರಾಪ್ತ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಬಲಿಯಾದವರೆಲ್ಲರೂ ಸಂಬಂಧಿಕರು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.