alex Certify ನಿಯಂತ್ರಣ ತಪ್ಪಿದ ವ್ಯಾನ್ ಲಾರಿಗೆ ಡಿಕ್ಕಿ: ಆರು ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿದ ವ್ಯಾನ್ ಲಾರಿಗೆ ಡಿಕ್ಕಿ: ಆರು ಜನ ಸಾವು

ತಮಿಳುನಾಡಿನ ತಿರುಚ್ಚಿ-ಸೇಲಂ ರಾಷ್ಟ್ರೀಯ ಹೆದ್ದಾರಿಯ ತಿರುವಾಸಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಪ್ರಾಪ್ತ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ. ಭಾನುವಾರ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಟ್ರಕ್‌ ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೂವರು ಗಂಭೀರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರನ್ನು ಕೆ. ಮುತ್ತುಸ್ವಾಮಿ(58), ಸಂತೋಷ್ ಕುಮಾರ್(31), ಪಿ. ಆನಂದಾಯಿ(57), ತಿರುಮೂರ್ತಿ(43), ಜಿ. ಸಕುಂತಲಾ(36), ಪಿ. ಮುರುಗನ್(23), ಮತ್ತೊಬ್ಬ ಅಪ್ರಾಪ್ತ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಬಲಿಯಾದವರೆಲ್ಲರೂ ಸಂಬಂಧಿಕರು ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...