alex Certify Road Accident in Karnataka : ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಮಂದಿ ಸಾವು : ಈ ಪೈಕಿ ಬೆಂಗಳೂರಿಗರೇ ಹೆಚ್ಚು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Road Accident in Karnataka : ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಮಂದಿ ಸಾವು : ಈ ಪೈಕಿ ಬೆಂಗಳೂರಿಗರೇ ಹೆಚ್ಚು

ಬೆಂಗಳೂರು : ರಾಜ್ಯದಲ್ಲಿ ಕಳೆದ 6 ತಿಂಗಳಲ್ಲಿ ರಸ್ತೆ ಅಪಘಾತದಿಂದ 5830 ಜನ ಸಾವನ್ನಪ್ಪಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

ಆಗಸ್ಟ್ ತಿಂಗಳೊಂದರಲ್ಲೇ ಕರ್ನಾಟಕದಲ್ಲಿ ಒಟ್ಟು 795 ರಸ್ತೆ ಅಪಘಾತಗಳು ಸಂಭವಿಸಿವೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ಸುರಕ್ಷತೆ) ಅಲೋಕ್ ಕುಮಾರ್ ಬಹಿರಂಗಪಡಿಸಿದ್ದಾರೆ. ಹಿಂದಿನ ತಿಂಗಳ ಅಂಕಿಅಂಶಗಳಿಗೆ ಹೋಲಿಸಿದರೆ ಮಾರಣಾಂತಿಕ ಅಪಘಾತಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

ಮೇ ತಿಂಗಳಲ್ಲಿ ಒಟ್ಟು 1094 ಮಾರಣಾಂತಿಕ ರಸ್ತೆ ಅಪಘಾತಗಳು ದಾಖಲಾಗಿದ್ದರೆ, ಜೂನ್ ಮತ್ತು ಜುಲೈನಲ್ಲಿ ಈ ಸಂಖ್ಯೆ 965 ಮತ್ತು 807 ರಷ್ಟಿತ್ತು. ರಾಜ್ಯದಲ್ಲಿ ರಸ್ತೆ ಅಪಘಾತಗಳಿಂದ ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ. ಮೇ-1094, ಜೂನ್-965, ಜುಲೈ-807, ಆಗಸ್ಟ್ ನಲ್ಲಿ 795 ಜನ ಮೃತಪಟ್ಟಿದ್ದಾರೆ. ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ ಶೇಕಡಾ 60 ರಷ್ಟು ಜನ ಬೈಕ್ ಸವಾರರು ಎಂಬುದು ತಿಳಿದು ಬಂದಿದೆ.
ಮಾರಣಾಂತಿಕ ಅಪಘಾತಗಳ ದತ್ತಾಂಶದಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ನಗರ ಪ್ರದೇಶಗಳು ಸಿಂಹಪಾಲು ಹೊಂದಿವೆ ಎಂದು ಅವರು ಹೇಳಿದರು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಪ್ರಮುಖ ಕೊಡುಗೆ ನೀಡಿವೆ. 2023 ರ ಮೊದಲಾರ್ಧದಲ್ಲಿ – 5830 ಸಾವುಗಳು. ಅಸಂಖ್ಯಾತ ಅಮೂಲ್ಯ ಜೀವಗಳನ್ನು ಉಳಿಸಲು ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಕಾರ್ಯತಂತ್ರಕ್ಕೆ ಸೂಕ್ತ ಗಮನ ನೀಡಬೇಕು” ಎಂದು ಅವರು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...