ವಿಜಯಪುರ : ಜಿಲ್ಲೆಯ ‘ಮೊರಾರ್ಜಿ ದೇಸಾಯಿ’ ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಬರಹಕ್ಕೆ ಕೊಕ್ ನೀಡಲಾಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ವಿಜಯಪುರ ಜಿಲ್ಲೆಯ ‘ಮೊರಾರ್ಜಿ ದೇಸಾಯಿ’ ವಸತಿ ಶಾಲೆಯ ಗೋಡೆಗಳಲ್ಲಿ ಈ ಮೊದಲು ‘’ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’’ ಎಂಬ ಬರಹವಿತ್ತು, ಆದರೆ ಇದನ್ನು ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ ಎಂದು ತಿದ್ದಲಾಗಿದೆ.
ರಾಷ್ಟ್ರಕವಿ ಕುವೆಂಪು ಅವರ ಬರಹಗಳನ್ನು ತಿದ್ದುವ ಮೂಲಕ ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ ಎಂದು ಸಾಹಿತ್ಯ ಪ್ರೇಮಿಗಳು ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.