alex Certify ಪ್ರಧಾನಿ ಮೋದಿ ಯಾವ ಫ್ಲೈಟ್ ನಲ್ಲಿ ತಿರುಗಾಡುತ್ತಾರೆ..? : ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ಯಾವ ಫ್ಲೈಟ್ ನಲ್ಲಿ ತಿರುಗಾಡುತ್ತಾರೆ..? : ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಮೈಸೂರು : ಪ್ರಧಾನಿ ಮೋದಿ ಯಾವ ಫ್ಲೈಟ್ ನಲ್ಲಿ ತಿರುಗಾಡುತ್ತಾರೆ , ಪ್ರಧಾನಿ ಮೋದಿ ಅವರದ್ದು ಐಶಾರಾಮಿ ಫ್ಲೈಟ್ ಅಲ್ವಾ ಎಂದು ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಿಎಂ ಹಾಗೂ ಸಚಿವರು ವಿಶೇಷ ಜೆಟ್ ವಿಮಾನದಲ್ಲಿ ಪ್ರಯಾಣ ವಿಚಾರಕ್ಕೆ ಸಂಬಂಧಿಸಿದಂತೆ  ಬಿಜೆಪಿ ಟೀಕೆಗೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.
‘ಪ್ರಧಾನಿ ಮೋದಿ ಯಾವ ಫ್ಲೈಟ್ ನಲ್ಲಿ ತಿರುಗಾಡುತ್ತಾರೆ..? ಮೋದಿ ಅವರದ್ದು ಐಶಾರಾಮಿ ಫ್ಲೈಟ್ ಅಲ್ವಾ..? ಬಿಜೆಪಿಯವರಿಗೆ ಹೋಗಿ ಈ ಪ್ರಶ್ನೆಯನ್ನು ಕೇಳಿ’ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಆರ್ ಅಶೋಕ್ ಮತ್ತು ಬಿ.ವೈ ವಿಜಯೇಂದ್ರ ಟೀಕೆ

ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ’ , ‘ಜನರ ದುಡ್ಡು ಆಕಾಶದಲ್ಲಿ ಜಾತ್ರೆ’ ಹೀಗಂತ ಸಿಎಂ ಸಿದ್ದರಾಮಯ್ಯ ಹಾಗೂ ಜಮೀರ್ ವಿರುದ್ಧ BJP ರಾಜ್ಯಾಧ್ಯ್ಷಕ್ಷ ಬಿ.ವೈ ವಿಜಯೇಂದ್ರ ವಾಗ್ಧಾಳಿ ನಡೆಸಿದ್ದಾರೆ.

ಸಿಎಂ ಹಾಗೂ ಸಚಿವರು ವಿಶೇಷ ಜೆಟ್ ವಿಮಾನದಲ್ಲಿ ಪ್ರಯಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲದಿಂದಾಗಿ ಜನರು, ರೈತರು ಕಂಗೆಟ್ಟಿದ್ದಾರೆ. ಬೆಳೆಗಳು ನಾಶವಾಗಿ ಅನ್ನದಾತ ಕಣ್ಣೀರಿಡುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಐಷಾರಾಮಿಯಾಗಿ ವಿಶೇಷ ಜೆಟ್ ವಿಮಾನದಲ್ಲಿ ಪ್ರಯಾಣ ಮಾಡುತ್ತಾ ಮೋಜು-ಮಸ್ತಿಯಲ್ಲಿ ತೊಡಗಿರುವುದು ಖಂಡನೀಯ ಎಂದು ಅಶೋಕ್ ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...