ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆಇಎ ನೆಲದಡಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಇಂದು ಉದ್ಘಾಟಿಸಲಾಗುತ್ತಿದ್ದು, ಇಂಧನ ಸಚಿವ ಕೆ.ಜೆ. ಜಾರ್ಜ್ ಇದನ್ನು ನೆರವೇರಿಸಲಿದ್ದಾರೆ.
ಬೆಸ್ಕಾಂ, ಬಿಬಿಎಂಪಿ ಸಹಭಾಗಿತ್ವದಲ್ಲಿ ಒಟ್ಟು 1.97 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪರಿವರ್ತಕ ಕೇಂದ್ರವನ್ನು ನಿರ್ಮಿಸಲಾಗಿದ್ದು, ನೆಲದಡಿಯಲ್ಲಿ ಕೇಬಲ್ ಹಾಗೂ ವಿದ್ಯುತ್ ಪರಿವರ್ತಕ ವ್ಯವಸ್ಥೆ ಮೂಲಕ ಸುರಕ್ಷತೆ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.
ಇಂದು ಬೆಳಿಗ್ಗೆ 11:00 ಗಂಟೆಗೆ ಮಲ್ಲೇಶ್ವರದ 15ನೇ ಅಡ್ಡರಸ್ತೆಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಈ ಕೇಂದ್ರವನ್ನು ಉದ್ಘಾಟಿಸಲಿದ್ದು, ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವತ್ ನಾರಾಯಣ ಭಾಗವಹಿಸಲಿದ್ದಾರೆ.