alex Certify BIG NEWS: ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆವಿಎ ನೆಲದಡಿಯ ವಿದ್ಯುತ್ ಪರಿವರ್ತಕ ಕೇಂದ್ರ ಇಂದು ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆವಿಎ ನೆಲದಡಿಯ ವಿದ್ಯುತ್ ಪರಿವರ್ತಕ ಕೇಂದ್ರ ಇಂದು ಉದ್ಘಾಟನೆ

ರಾಜ್ಯ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ನಿರ್ಮಿಸಿರುವ 500 ಕೆಇಎ ನೆಲದಡಿಯಲ್ಲಿ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಇಂದು ಉದ್ಘಾಟಿಸಲಾಗುತ್ತಿದ್ದು, ಇಂಧನ ಸಚಿವ ಕೆ.ಜೆ. ಜಾರ್ಜ್ ಇದನ್ನು ನೆರವೇರಿಸಲಿದ್ದಾರೆ.

ಬೆಸ್ಕಾಂ, ಬಿಬಿಎಂಪಿ ಸಹಭಾಗಿತ್ವದಲ್ಲಿ ಒಟ್ಟು 1.97 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪರಿವರ್ತಕ ಕೇಂದ್ರವನ್ನು ನಿರ್ಮಿಸಲಾಗಿದ್ದು, ನೆಲದಡಿಯಲ್ಲಿ ಕೇಬಲ್ ಹಾಗೂ ವಿದ್ಯುತ್ ಪರಿವರ್ತಕ ವ್ಯವಸ್ಥೆ ಮೂಲಕ ಸುರಕ್ಷತೆ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಸಹಕಾರಿಯಾಗಲಿದೆ ಎಂದು ಹೇಳಲಾಗಿದೆ.

ಇಂದು ಬೆಳಿಗ್ಗೆ 11:00 ಗಂಟೆಗೆ ಮಲ್ಲೇಶ್ವರದ 15ನೇ ಅಡ್ಡರಸ್ತೆಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಈ ಕೇಂದ್ರವನ್ನು ಉದ್ಘಾಟಿಸಲಿದ್ದು, ಕ್ಷೇತ್ರದ ಶಾಸಕ ಡಾ. ಸಿ.ಎನ್. ಅಶ್ವತ್ ನಾರಾಯಣ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...