ಮಣಿಪುರ : ಮಣಿಪುರದಲ್ಲಿನ ಹಿಂಸಾಚಾರ (Manipur violence) ನಿಲ್ಲದ ಕಾರಣ ಮಣಿಪುರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ(President’s rule)ವನ್ನು ಹೇರುವ ಕರೆ ತೀವ್ರಗೊಂಡಿದೆ.
ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಭಾನುವಾರ ದುಷ್ಕರ್ಮಿಗಳ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಸೇನಾ ಸೈನಿಕರೊಬ್ಬರು ಗಾಯಗೊಂಡಿದ್ದಾರೆ. ಗುಂಡಿನ ದಾಳಿಯು ಕಾಂಟೋ ಸಬಾಲ್ ನಿಂದ ಚಿಂಗ್ಮಾಂಗ್ ಗ್ರಾಮದವರೆಗೆ ನಡೆದಿತ್ತು. ಸದ್ಯ ಸೈನಿಕನ ಸ್ಥಿತಿ ಸ್ಥಿರವಾಗಿದೆ. ಘಟನೆ ನಡೆದ ಕೂಡಲೇ ಅವರನ್ನು ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಚಿನ್ಮಾಂಗ್ ಗ್ರಾಮದಲ್ಲಿ ದುಷ್ಕರ್ಮಿಗಳು ಮೂರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಆದಾಗ್ಯೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಸೇನೆಯು ಬೆಂಕಿಯನ್ನು ನಂದಿಸಿದೆ.
ಈಶಾನ್ಯ ರಾಜ್ಯದಲ್ಲಿನ ಹಿಂಸಾಚಾರಕ್ಕೆ ಬಿಜೆಪಿಯನ್ನು ದೂಷಿಸಿದ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ, ಶಾಂತಿ, ಸೌಹಾರ್ದತೆ ಮತ್ತು ನೆಮ್ಮದಿಯನ್ನು ಕಾಪಾಡಿಕೊಳ್ಳಲು ಸರ್ಕಾರ ಎರಡೂ ಕಡೆಯವರಿಗೆ ಮನವಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.