ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ನೀಡಲಾಗಿದೆ.
2023 -24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂ ರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ನೀಡಲಾಗುವುದು. ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ 2.5 ಲಕ್ಷ ರೂಪಾಯಿ ಮೀರಬಾರದೆಂದು ಷರತ್ತು ವಿಧಿಸಿರುವ ಹಿನ್ನೆಲೆಯಲ್ಲಿ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ಪ್ರಮಾಣ ಪತ್ರ ಸಲ್ಲಿಸಬೇಕಿದೆ. ಫೆಬ್ರವರಿ 29ರೊಳಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಂದ ಅಧಿಕೃತ ಪ್ರಕಟಣೆ ನೀಡಲಾಗಿದೆ.