alex Certify ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 4 ವರ್ಷ ಜೈಲು, 40 ಲಕ್ಷ ರೂ. ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 4 ವರ್ಷ ಜೈಲು, 40 ಲಕ್ಷ ರೂ. ದಂಡ

ಬೆಂಗಳೂರು: ನಿಗದಿತ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಿಬಿಎಂಪಿ ಎಆರ್ಓ ಪ್ರಸನ್ನಕುಮಾರ್ ಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 40 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಬೆಂಗಳೂರಿನ ಲೋಕಾಯುಕ್ತ ವಿಶೇಷ ಕೋರ್ಟ್ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. 2013ರಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಪ್ರಸನ್ನಕುಮಾರ್ ಶೇಕಡ 61.69 ರಷ್ಟು ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದ ಆರೋಪ ಕೇಳಿಬಂದಿತ್ತು.

38,96,310 ರೂಪಾಯಿ ಆದಾಯ ಮೀರಿ ಆಸ್ತಿ ಗಳಿಕೆ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ವರ್ಷ ಜೈಲು 40 ಲಕ್ಷ ರೂಪಾಯಿ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಸಿಸಿಹೆಚ್ 24 ನ್ಯಾಯಾಧೀಶರಾದ ಲಕ್ಷ್ಮೀನಾರಾಯಣ ಭಟ್ ತೀರ್ಪು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...