ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿ ಐಟಿ ಇಲಾಖೆ ದಾಳಿ ನಡೆಸಿ ಬರೋಬ್ಬರಿ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.
ಆದಾಯ ತೆರಿಗೆ ಇಲಾಖೆಯು ಮಹಾರಾಷ್ಟ್ರದ ನಾಸಿಕ್ ಮೂಲದ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಲಾಗಿದೆ. ಜ್ಯುವೆಲರ್ಸ್ ಮಾಲೀಕರ ಬಹಿರಂಗಪಡಿಸದ ವಹಿವಾಟುಗಳಿಗೆ ಪ್ರತಿಕ್ರಿಯೆಯಾಗಿ ಐಟಿ ಶೋಧ ಕಾರ್ಯಾಚರಣೆ ನಡೆಸಿದೆ.
ಐಟಿ ಇಲಾಖೆ ಅಧಿಕಾರಿಗಳ ಪ್ರಕಾರ, ಸುಮಾರು 26 ಕೋಟಿ ರೂಪಾಯಿ ನಗದು ಮತ್ತು 90 ಕೋಟಿ ರೂಪಾಯಿ ಮೌಲ್ಯದ ಲೆಕ್ಕಕ್ಕೆ ಸಿಗದ “ಸಂಪತ್ತಿನ” ದಾಖಲೆಗಳನ್ನು ಶೋಧದ ಸಮಯದಲ್ಲಿ ವಶಪಡಿಸಿಕೊಳ್ಳಲಾಗಿದೆ.