ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸುರಕ್ಷತೆ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗಿದೆ.
ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ನೂರಾರು ಜನರು ಸಾವನ್ನಪಿದ್ದಾರೆ. ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳು ಹೆಚ್ಚುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮೂವರು ತಜ್ಞರ ಸಮಿತಿ ರಚನೆ ಮಾಡಿದೆ.
ಮೂವರು ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಸಮಿತಿ ಹೆದ್ದಾರಿಯ ಸುರಕ್ಷತೆ ಬಗ್ಗೆ ಪರಿಶೀಲಿಸಿ ಅಪಘಾತ ತಡೆಯುವ ನಿಟ್ಟಿ ಮಾರ್ಗೋಪಾಯಗಳನ್ನು ನೀಡಲಿದೆ.
ರಸ್ತೆ ಸುರಕ್ಷೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್ ಹೆಚ್ ಎ ಐನ ಪ್ರವೀಣ್ ಕುಮಾರ್, ಜೈವರ್ಧನ್ ಸಿಂಗ್ ಅವರನ್ನೊಳಗೊಂಡ ಮೂವರ ಸಮಿತಿ ರಚಿಸಲಾಗಿದ್ದು, ಜುಲೈ 20ರೊಳಗೆ ಎಕ್ಸ್ ಪ್ರೆಸ್ ವೇಗೆ ಭೇಟಿ ನೀಡಲು ಸೂಚಿಸಲಾಗಿದೆ. ಅಲ್ಲದೇ 10 ದಿನಗಳಲ್ಲಿ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.