ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದೆ.
ಹೌದು, ರಾಜ್ಯದಲ್ಲಿ ಕಳೆದ 2-3 ದಿನದಿಂದ ಬೆಂಗಳೂರಿನಲ್ಲಿ ಹೆಚ್ಚಿನ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ಬರೊಬ್ಬರಿ 95 ಜನರಲ್ಲಿ ಕೊರೊನಾ ಕಂಡು ಬಂದಿದೆ. ಈಗಾಗಲೇ ದಾಖಲಾಗುತ್ತಿರುವ ಕೇಸ್ಗಳಲ್ಲಿ ಶೇಕಡಾ 90 ರಷ್ಟು ಬೆಂಗಳೂರಿನಲ್ಲೇ ಕಂಡು ಬರುತ್ತಿರುವುದರಿಂದ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಕ್ಕೆ ಮುಂದಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೊಸವರ್ಷಕ್ಕೆ ಬಿಬಿಎಂಪಿ ( ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ) ಮಾರ್ಗಸೂಚಿ ಬಿಡುಗಡೆಗೆ ಚಿಂತನೆ ನಡೆಸಿದ್ದು, ಇಂದು ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ.