ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗಿದೆ. ಆಗಸ್ಟ್ ನಿಂದ ಪರಿಷ್ಕೃತ ಭತ್ಯೆ ಜಾರಿಗೆ ಬರಲಿದೆ.
ರಾಜ್ಯ ಸರ್ಕಾರದ ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ನೌಕರರಿಗೆ ನೀಡಲಾಗುವ ತಿಂಗಳ ವೈದ್ಯಕೀಯ ಭತ್ಯೆಯನ್ನು 200 ರೂ.ನಿಂದ 500 ರೂ.ಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆಗಸ್ಟ್ ತಿಂಗಳಿನಿಂದ ಪರಿಷ್ಕೃತ ಜಾರಿಗೆ ಬರಲಿದೆ. ಸರ್ಕಾರಿ ನೌಕರರಿಗೆ ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯಾಗಿರುವವರೆಗೆ ಈ ವೈದ್ಯಕೀಯ ಸೌಲಭ್ಯ ಮುಂದುವರೆಯಲಿದೆ ಎಂದು ಹೇಳಲಾಗಿದೆ.