ಹಲಸಿನ ಹಣ್ಣನ್ನು ವಿವಿಧ ರೀತಿಯ ಅಡುಗೆ ತಯಾರಿಸಲು ಬಳಸುತ್ತಾರೆ. ಈ ಹಣ್ಣಿನಲ್ಲಿ ಹಲವು ರೀತಿಯ ಪೋಷಕಾಂಶಗಳಿವೆ. ಹಾಗೇ ಇದರ ಬೀಜಗಳು ಕೂಡ ಪ್ರಯೋಜನಕಾರಿಯಾಗಿದ್ದು, ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ.
ಹಲಸಿನ ಹಣ್ಣಿನ ಬೀಜದಿಂದ ಸ್ಕ್ರಬ್ ಮಾಡಿ ಸತ್ತ ಚರ್ಮವನ್ನು ನಿವಾರಿಸಿಕೊಂಡು ಚರ್ಮದ ಹೊಳಪನ್ನು ಹೆಚ್ಚಿಸಿಕೊಳ್ಳಬಹುದು. ಅದಕ್ಕಾಗಿ 5 ಹಲಸಿನ ಹಣ್ಣಿನ ಬೀಜಗಳು, 1 ಕಪ್ ಅವಲಕ್ಕಿ, 1 ಕಪ್ ಹಾಲು ಸೇರಿಸಿ ಮಿಕ್ಸಿಯಲ್ಲಿ ತರಿತರಿಯಾಗಿ ರುಬ್ಬಿ ಪೇಸ್ಟ್ ತಯಾರಿಸಿಕೊಳ್ಳಿ.
ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿ ವೃತ್ತಾಕಾರ ಚಲನೆಯಲ್ಲಿ 5 ನಿಮಿಷಗಳ ಕಾಲ ಮಸಾಜ್ ಮಾಡಿ. ನಂತರ ತಣ್ಣೀರಿನಲ್ಲಿ ವಾಶ್ ಮಾಡಿ ಬಳಿಕ ಮಾಯಿಶ್ಚರೈಸರ್ ಹಚ್ಚಿ.