ಬೆಂಗಳೂರು: ಮುಂಗಾರು ಮಾರುತಗಳು ಸಂಪೂರ್ಣವಾಗಿ ದೇಶದಿಂದ ಹಿಂದೆ ಸರಿದಿವೆ. ಇದರೊಂದಿಗೆ ರಾಜ್ಯದಲ್ಲಿ ಮಳೆ ಪೂರ್ಣ ಪ್ರಮಾಣದಲ್ಲಿ ಕಡಿಮೆಯಾಗಿದೆ.
ದೇಶದಲ್ಲಿ ಜೂನ್ ನಿಂದ ಆರಂಭವಾಗಿದ್ದ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿದಿದೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ರಾಜ್ಯದಲ್ಲಿ ಮಳೆ ಕ್ಷೀಣವಾಗಿದೆ.
ಅಕ್ಟೋಬರ್ 29 ರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಒಳನಾಡಿನ ಚಾಮರಾಜನಗರ, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು, ರಾಮನಗರ, ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉಷ್ಣಾಂಶ ವಾಡಿಕೆಗಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕನ್ನಡ, ಉಡುಪಿ, ರಾಯಚೂರು, ಗದಗ, ಧಾರವಾಡ, ಮಂಡ್ಯ, ಚಿತ್ರದುರ್ಗ, ಕೊಪ್ಪಳ, ಬಳ್ಳಾರಿ, ತುಮಕೂರು, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ.