ಹಾವೇರಿ : ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಬಾಲಕನೊಬ್ಬ ಮೃತಪಟ್ಟಿದ್ದು, ಈ ಬೆನ್ನಲ್ಲೇ ಹಾವೇರಿಯಲ್ಲಿ 9 ವರ್ಷದ ಮಗು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.
ಮೃತ ಮಗುವನ್ನು ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ದ್ಯಾಮಪ್ಪ ಬನ್ನಿಹಟ್ಟಿ ಎಂಬುವವರ ಪುತ್ರಿ ದಿವ್ಯ ದ್ಯಾಮಪ್ಪ ಎಂದು ಗುರುತಿಸಲಾಗಿದೆ . ಜ್ವರದಿಂದ ಬಳಲುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಮಗು ಮೃತಪಟ್ಟಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ 11 ವರ್ಷದ ಬಾಲಕ ಗಗನ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಅಂಜನಾಪುರದ ಗಗನ್ ಜಂಬೂಸವಾರಿ ದಿಣ್ಣೆ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ. ಕೆಲ ದಿನಗಳಿಂದ ಡೆಂಘೀ ಜ್ವರದಿಂದ ಬಳಲುತ್ತಿದ್ದನು.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.