
ಭಾರತದ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯ ವಿರುದ್ಧ ಅಶ್ವಿನ್ ಅವರ ಅದ್ಭುತ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು”ಚೆನ್ನಾಗಿ ಬೌಲಿಂಗ್ ಮಾಡಿದ್ರಿ ಅಶ್ವಿನ್ ಕ್ಲಾಸ್!” ಎಂದು ಕುಂಬ್ಳೆ ಟ್ವೀಟ್ ಮಾಡಿದ್ದಾರೆ.
ಭಾರತ vs ಆಸ್ಟ್ರೇಲಿಯಾ 4 ನೇ ಟೆಸ್ಟ್ ನಲ್ಲಿ 6 ವಿಕಿಟ್ ಪಡೆವ ಮೂಲಕ ಆರ್. ಅಶ್ವಿನ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ, ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.