ನವೆಂಬರ್ 25ರಿಂದ ಭಾರತ-ನ್ಯೂಜಿಲೆಂಡ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಬೇಸರದ ಸುದ್ದಿ ಸಿಕ್ಕಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಆಡ್ತಿಲ್ಲ. ಅಜಿಂಕ್ಯ ರಹಾನೆಗೆ ತಂಡದ ನಾಯಕತ್ವ ನೀಡಲಾಗಿದೆ. ಆದ್ರೆ ಪಂದ್ಯದ ಮೊದಲೇ ಆರಂಭಿಕ ಆಟಗಾರ ಕೆಎಲ್ ರಾಹುಲ್ ಗಾಯಗೊಂಡಿದ್ದಾರೆ. ಅವರು ಮೊದಲ ಟೆಸ್ಟ್ ನಲ್ಲಿ ಆಡ್ತಿಲ್ಲ ಎಂದು ಮೂಲಗಳು ಹೇಳಿವೆ.
ಕೆಎಲ್ ರಾಹುಲ್ ಗಾಯದ ಕಾರಣ ಮೊದಲ ಟೆಸ್ಟ್ ನಿಂದ ಹೊರಬಿದ್ದಿದ್ದಾರೆ. ಈ ವಿಷಯವನ್ನು ಬಿಸಿಸಿಐ ಮೂಲವೊಂದು ಬಹಿರಂಗಪಡಿಸಿದೆ. ರಾಹುಲ್ ಬದಲು ಶುಭ್ಮನ್ ಗಿಲ್ ಇನ್ನಿಂಗ್ಸ್ ಶುರು ಮಾಡುವ ಸಾಧ್ಯತೆಯಿದೆ. ರೋಹಿತ್ ಶರ್ಮಾ ಈ ಟೆಸ್ಟ್ ಸರಣಿಯಲ್ಲಿ ಆಡ್ತಿಲ್ಲ. ಅವರಿಗೆ ಮೊದಲೇ ವಿಶ್ರಾಂತಿ ನೀಡಲಾಗಿದೆ.
ರೋಹಿತ್ ಹೊರತಾಗಿ ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ಸರಣಿಯಲ್ಲಿ ಆಡ್ತಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ನಲ್ಲಿ ಹೊಸ ಆಟಗಾರರಿಗೆ ಅವಕಾಶ ಸಿಕ್ಕಿದೆ.
ಕೆ.ಎಸ್.ಭರತ್, ಶ್ರೇಯಸ್ ಅಯ್ಯರ್ ಮತ್ತು ಪ್ರಸಿದ್ಧ್ ಕೃಷ್ಣ ಮೊದಲ ಬಾರಿ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ. ಜಯಂತ್ ಯಾದವ್‌ಗೆ ಸುದೀರ್ಘ
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ :
ಅಜಿಂಕ್ಯ ರಹಾನೆ (ನಾಯಕ), ಚೇತೇಶ್ವರ ಪೂಜಾರ (ಉಪನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಶುಬ್ ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ, ಕೆ ಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.