ಓಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅನುಮತಿ ಸಿಗುತ್ತಿಲ್ಲ.
ಓಮಿಕ್ರಾನ್ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿತ್ತು. ಅಲ್ಲದೇ, ಈಗ ಈ ಕೊರೊನಾ ರೂಪಾಂತರ ಹಲವು ದೇಶಗಳಿಗೆ ಕಾಲಿಟ್ಟು ಭೀತಿ ಹುಟ್ಟಿಸುತ್ತಿದೆ. ಇದರ ನಡುವೆಯೇ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ 3 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನು ಆಯೋಜಿಸಲಾಗುತ್ತಿದ್ದು, ಆಟಗಾರರ ಹಿತದೃಷ್ಟಿಯಿಂದ ಈ ನಿರ್ಣಯ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ.
ಸೀಬೆ ಹಣ್ಣು ತಿನ್ನುವುದರಿಂದ ಇದೆ ಆರೋಗ್ಯಕ್ಕೆ ಇಷ್ಟೆಲ್ಲಾ ಲಾಭ…..!
ಈ ಮೊದಲು ದಕ್ಷಿಣ ಆಫ್ರಿಕಾ ಸರ್ಕಾರವು 2 ಸಾವಿರ ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಲು ಮುಂದಾಗಿತ್ತು. ಸದ್ಯ ಓಮಿಕ್ರಾನ್ ಭಯ ಹೆಚ್ಚಾಗುತ್ತಿದ್ದಂತೆ ಈ ನಿರ್ಣಯವನ್ನೂ ಕೈ ಬಿಟ್ಟಿದೆ.
ಈಗಾಗಲೇ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾಕ್ಕೆ ತೆರಳಿ ಅಭ್ಯಾಸ ನಡೆಸುತ್ತಿದ್ದು, ಕೋಚ್ ರಾಹುಲ್ ದ್ರಾವಿಡ್ ತಮ್ಮ ಹುಡುಗರಿಗೆ ತರಬೇತಿ ನೀಡುತ್ತಿದ್ದಾರೆ. ನಾಯಕ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡವನ್ನು ಡಿ. 26ರಂದು ಮೊದಲ ಟೆಸ್ಟ್ ನಲ್ಲಿ ಎದುರಿಸಲಿದೆ.