ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಅವರ ಹೆಸರಿಗೆ ದಾಖಲೆ ಬರೆದುಕೊಂಡಿದ್ದಾರೆ.
ಈ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಕೊಹ್ಲಿ 79 ರನ್ ಗಳಿಸಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಇವರ ಬ್ಯಾಟ್ ನಿಂದ ಮೂಡಿ ಬಂದ ಉತ್ತಮ ಮೊತ್ತ ಕೂಡ ಇದೇ ಆಗಿದೆ. ಈ ಮೂಲಕ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ವಿರಾಟ್ ಕೊಹ್ಲಿ 79 ರನ್ ಗಳಿಸಿ ಶತಕದಿಂದ ವಂಚಿತರಾಗಿದ್ದರು. ಈ ಮೂಲಕ ಕಿಂಗ್ ಕೊಹ್ಲಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆ ಮುರಿದಿದ್ದಾರೆ.
ದಕ್ಷಿಣ ಆಫ್ರಿಕಾ ನೆಲದಲ್ಲಿ ಎಲ್ಲ ಸ್ವರೂಪದ ಆಟದಲ್ಲಿ ಹೆಚ್ಚು ರನ್ ಗಳಿಸಿದ ನಾಯಕರ ಪಟ್ಟಿಯಲ್ಲಿ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ. ಈ ಹಿಂದೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಎಲ್ಲ ಸ್ವರೂಪದ ಆಟಗಳಲ್ಲಿ ದಕ್ಷಿಣ ಆಫ್ರಿಕಾ ನೆಲದಲ್ಲಿ ಹೆಚ್ಚು ರನ್ ಗಳಿಸಿದ್ದರು.
ಗಂಗೂಲಿ ಎಲ್ಲ ಸ್ವರೂಪಗಳಲ್ಲಿ ದಕ್ಷಿಣ ಆಫ್ರಿಕಾ ನೆಲದಲ್ಲಿ 911 ರನ್ ಗಳಿಸಿದ್ದರು. 1003ರನ್ ಗಳನ್ನು ಸಿಡಿಸುವುದರ ಮೂಲಕ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ. ಗಂಗೂಲಿ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಶ್ರೀಲಂಕಾದ ಮಾಜಿ ನಾಯಕ ಅರ್ಜುನ್ ರಣತುಂಗ 674 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಸನತ್ ಜಯಸೂರ್ಯ 637 ರನ್ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ. ಧೋನಿ 592 ರನ್ ಗಳಿಸುವುದರ ಮೂಲಕ ದಕ್ಷಿಣ ಆಫ್ರಿಕಾದ ನೆಲದಲ್ಲಿ ಹೆಚ್ಚು ರನ್ ಗಳಿಸಿದ ನಾಯಕರ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.