ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಕೊರೊನಾ ಕರಿನೆರಳು ಬಿದ್ದಿದೆ. ಟೀಂ ಇಂಡಿಯಾದ 8 ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎನ್ನಲಾಗ್ತಿದೆ. ಹಿರಿಯ ಆಟಗಾರ ಶಿಖರ್ ಧವನ್, ಯುವ ಬ್ಯಾಟ್ಸ್ ಮನ್ ರಿತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಅಯ್ಯರ್ ಸೇರಿದಂತೆ 8 ಮಂದಿಗೆ ಕೊರೊನಾ ಪಾಸಿಟಿವ್ ಎಂಬ ವರದಿ ಬಂದಿದೆ.
ಫೆಬ್ರವರಿ ಆರರಿಂದ ಟೀಂ ಇಂಡಿಯಾ ಹಾಗೂ ವೆಸ್ಟ್ ಇಂಡೀಸ್ ಮಧ್ಯೆ ಏಕದಿನ ಸರಣಿ ನಡೆಯಬೇಕಿತ್ತು. ಕೊರೊನಾ ಹಿನ್ನಲೆಯಲ್ಲಿ ಸರಣಿ ವೇಳಾಪಟ್ಟಿಯನ್ನು ಬದಲಿಸುವ ಸಾಧ್ಯತೆಯಿದೆ. ಕೊರೊನಾ, ಬಿಸಿಸಿಐ ತಲೆಬಿಸಿಗೆ ಕಾರಣವಾಗಿದೆ. ಫೆಬ್ರವರಿ 12ರಂದು ಐಪಿಎಲ್ ಮೆಗಾ ಹರಾಜು ನಡೆಯಲಿದ್ದು,ಇದಕ್ಕೆ ಕೊರೊನಾ ಅಡ್ಡಿಯಾದ್ರೆ ಎಂಬ ಆತಂಕ ಎದುರಾಗಿದೆ. ಬಿಸಿಸಿಐ ವೈದ್ಯಕೀಯ ತಂಡವು ಆಟಗಾರರ ಮೇಲೆ ವಿಶೇಷ ಗಮನವಿಟ್ಟಿದೆ. ಸೋಂಕಿಗೊಳಗಾದ ಆಟಗಾರರನ್ನು ಹಾಗೂ ಸಿಬ್ಬಂದಿಯನ್ನು ಪ್ರತ್ಯೇಕವಾಗಿಡಲಾಗಿದೆ.
ಏಕದಿನ ಸರಣಿ: ದಾಖಲೆಯ 1000 ನೇ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್
ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯನ್ನು 0-3 ಅಂತರದಲ್ಲಿ ಕಳೆದುಕೊಂಡಿರುವ ಭಾರತ ತಂಡ ಇದೀಗ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ. ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿವೆ. ಪ್ರೇಕ್ಷಕರಿಗೆ ಕ್ರೀಡಾಂಗಣ ಪ್ರವೇಶ ನಿಷೇಧಿಸಲಾಗಿದೆ. ಫೆಬ್ರವರಿ 6, 9 ಮತ್ತು 11 ರಂದು ಏಕದಿನ ಸರಣಿಯ ಪಂದ್ಯಗಳು ನಡೆಯಲಿವೆ.