ಬೆಂಗಳೂರು : ಸೋಮವಾರದಿಂದ ಸಾರಿಗೆ ನೌಕರರ ಅನಿರ್ಧಿಷ್ಟಾವದಿ ಮುಷ್ಕರ ಆರಂಭವಾಗಿದ್ದು, ಇಂದು ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆಯಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ.
ಸಾರಿಗೆ ನೌಕರರ ಅನಿರ್ಧಿಷ್ಟಾವದಿ ಮುಷ್ಕರ ಹಿನ್ನೆಲೆ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು 2020 ಡಿಸೆಂಬರ್ ಹಾಗೂ 2021ರಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಸಜ್ಜಾಗಿದ್ದಾರೆ.
ಸಮಾನ ವೇತನ, ಸರ್ಕಾರಿ ನೌಕರರೆಂದು ಪರಿಗಣನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿ ಅಂದಿನ ಸರ್ಕಾರ ಭರವಸೆಗಳನ್ನು ಕೊಟ್ಟು ಕೈತೊಳೆದುಕೊಂಡಿತ್ತು. ಆದರೆ ಈವರೆಗೂ ಸಾರಿಗೆ ಸಿಬ್ಬಂದಿಗಳ 6 ಬೇಡಿಕೆಗಳು ಈಡೇರಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.