ಶಿವಮೊಗ್ಗ: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಗಸ್ಟ್ 15 ರ ಮಂಗಳವಾರ ಬೆಳಿಗ್ಗೆ 9 ಗಂಟೆಗೆ ಸಾಗರ ರಸ್ತೆಯ ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ಧ್ವಜಾರೋಹಣ ನೆರವೇರಿಸುವರು. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಿ. ಸುಧಾಕರ್ ಇವರ ಉಪಸ್ಥಿತಿ ಇರಲಿದೆ.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿಧಿನಿಗಳು ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಸರ್ಕಾರಿ ಅಧಿಕಾರಿ/ನೌಕರರು, ಸಾರ್ವಜನಿಕರು ಪಾಲ್ಗೊಳ್ಳುವರು. ಅಂದು ಸಂಜೆ 5 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ನಗರದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.