alex Certify ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ಇರಾನ್, ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ ಇರಾನ್, ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಸಲಹೆ

ನವದೆಹಲಿ: ಮುಂದಿನ ಸೂಚನೆ ಬರುವವರೆಗೂ ಇರಾನ್ ಮತ್ತು ಇಸ್ರೇಲ್‌ಗೆ ಪ್ರಯಾಣಿಸುವುದನ್ನು ನಿಲ್ಲಿಸುವಂತೆ ಭಾರತೀಯರಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಮುಂದಿನ 48 ಗಂಟೆಗಳಲ್ಲಿ ಇರಾನ್ ಇಸ್ರೇಲ್ ಮೇಲೆ ನೇರ ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ವರದಿಗಳ ನಡುವೆ ಈ ಸೂಚನೆ ನೀಡಲಾಗಿದೆ.

ಪ್ರಸ್ತುತ ಇರಾನ್ ಅಥವಾ ಇಸ್ರೇಲ್‌ನಲ್ಲಿ ನೆಲೆಸಿರುವ ಭಾರತೀಯರು ಅಲ್ಲಿನ ಭಾರತೀಯ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಿ ತಮ್ಮನ್ನು ನೋಂದಾಯಿಸಿಕೊಳ್ಳುವಂತೆ ಸಚಿವಾಲಯ ತಿಳಿಸಿದೆ.

ಸುರಕ್ಷತೆ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲು ಮತ್ತು ಓಡಾಟ ಕನಿಷ್ಠ ಮಟ್ಟಕ್ಕೆ ನಿರ್ಬಂಧಿಸಲು ವಿನಂತಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಇರಾನ್ ಇಸ್ರೇಲ್ ಮೇಲೆ ನೇರ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಇರಾನ್ ನಾಯಕತ್ವದಿಂದ ಮಾಹಿತಿ ಪಡೆದ ವ್ಯಕ್ತಿಯನ್ನು ಉಲ್ಲೇಖಿಸಿ ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ ದಿನದಂದು ಸಚಿವಾಲಯದ ಸಲಹೆ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...